ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ. ಪಂ. ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಪಿಡಿಓ ರಘು ಎನ್.ಬಿ, ಸದಸ್ಯರಾದ ಗಣೇಶ್ ಉದನಡ್ಕ, ರಾಮಣ್ಣ ಗೌಡ ಮುಗರಂಜ, ಪ್ರವೀಣ್ ಚಂದ್ರ ರೈ ಕುಮೇರು, ವಸಂತ ಪೆರ್ಲೋಡಿ, ದೇವಿಪ್ರಸಾದ್ ದೋಳ್ಪಾಡಿ, ಲೋಕಯ್ಯ ಪರವ ದೋಳ್ಪಾಡಿ, ತಾರಾನಾಥ ಇಡ್ಯಡ್ಕ, ಲಲಿತಾ ದರ್ಖಾಸು, ಸುನಂದಾ ಅಬ್ಬಡ, ಸುಲೋಚನಾ ಮಿಯೋಳ್ಪೆ, ಅಂಬಾಕ್ಷಿ ಕೂರೇಲು, ತೇಜಕುಮಾರಿ ಉದ್ಲಡ್ಡ, ಕೀರ್ತಿಕುಮಾರಿ ಅಂಬುಲ, ಮೀರಾ, ಕಾಣಿಯೂರು ಗ್ರಾ. ಪಂ ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಚಾರ್ವಾಕ ಸಿ ಎ ಬ್ಯಾಂಕ್ ಮಾಜಿ ಅಧ್ಯಕ್ಷ ಧರ್ಮೇಂದ್ರ ಕಟ್ಟತ್ತಾರು, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಧನಂಜಯ ಕೇನಾಜೆ, ಕಾಣಿಯೂರು ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆಶಾ ಅಭಿಕಾರ್, ಹಾಗೂ ಚಾರ್ವಾಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ನಿರ್ದೇಶಕರು, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಗ್ರಾಮ ಮಟ್ಟದ ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.