ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಹಿರಿಯರ ತ್ಯಾಗ ಬಲಿದಾನಗಳನ್ನು ಇಂದು ಸ್ಮರಿಸಬೇಕಾಗುವುದು ನಮ್ಮೆಲ್ಲರ ಕರ್ತವ್ಯ – ಯಶೋಧ

ಪುತ್ತೂರು: ಸ.ಹಿ ಪ್ರಾ ಶಾಲೆ ಸಜಂಕಾಡಿ ಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು.

ಶಾಲಾ ಎಸ್ .ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಯಶೋಧ ರಾಷ್ಟ್ರ ಧ್ವಜಾರೋಹಣಗೈದು ಹಿರಿಯರ ಪರಿಶ್ರಮ,ತ್ಯಾಗದ ಫಲವಾಗಿ ನಾವು ಇಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದೇವೆ. ಅವರುಗಳ ತ್ಯಾಗ ಬಲಿದಾನಗಳನ್ನು ನಾವು ಇಂದು ಸ್ಮರಿಸಬೇಕಾಗಿದೆ ಎಂದರು. ಬಳಿಕ ನಡೆದ ತಿರಂಗಾ ಯಾತ್ರೆಗೆ ಎಸ್‌.ಡಿ‌.ಎಂ.ಸಿ‌ ಉಪಾಧ್ಯಕ್ಷ ಇಬ್ರಾಹಿಂ ಕೆ ಚಾಲನೆ ನೀಡಿ ಶುಭಹಾರೈಸಿದರು. ತಿರಂಗಾಯಾತ್ರೆಯಲ್ಲಿ ಭಾರತ ಮಾತೆ ,ಒನಕೆ ಓಬವ್ವ ,ಚೆನ್ನಮ್ಮ ವೇಷ ತೊಟ್ಟು ವಿದ್ಯಾರ್ಥಿಗಳು ಹೆಜ್ಜೆ ಹಾಕಿದ್ದು ಆಕರ್ಷಕವಾಗಿತ್ತು. ಬಳಿಕ ಎಸ್ .ಡಿ.ಎಂ.ಸಿ ಅಧ್ಯಕ್ಷೆ ಯಶೋಧರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಸುಳ್ಯ ಜೆ.ಎಂ.ಎಫ್ ಕೋರ್ಟ್ ನ ಉದ್ಯೋಗಿ ಆಶಿತಾ ನಿತೇಶ್ ಉಪಾಧ್ಯಕ್ಷ ಇಬ್ರಾಹಿಂ ಕೆ, ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ, ಪದವೀಧರ ಶಿಕ್ಷಕ ಗಣೇಶ ನಾಯಕ್ ಪುತ್ತೂರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆ ಗಳಲ್ಲಿ ವಿಜೇತರಾದವರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗಾಯನ ಕಾರ್ಯಕ್ರಮ ನಡೆಯಿತು. ಶಾಲಾ ಪ್ರಭಾರ ಮುಖ್ಯಗುರು ಸುಮಲತಾ ಪಿ.ಕೆ ಸ್ವಾಗತಿಸಿ , ಶಿಕ್ಷಕ ಗಣೇಶ ನಾಯಕ್ ಪುತ್ತೂರು ವಂದಿಸಿದರು. ಅತಿಥಿ ಶಿಕ್ಷಕಿ ಆಯಿಷತ್ ಮಿಸ್ರಿಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here