ವಿಟ್ಲ: ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ.ಫಾತಿಮಾ ಇಸ್ಮತ್ ಧ್ವಜಾರೋಹಣ ಗೈದರು.
ಕಾರ್ಯಕ್ರಮದಲ್ಲಿ ಜನಪ್ರಿಯ ಸೆಂಟ್ರಲ್ ಶಾಲೆಯ ನಿರ್ದೇಶಕರಾದ ನೌಶೀನ್ ಬದ್ರಿಯಾ, ಪ್ರಾಂಶುಪಾಲರಾದ ಲಿಬಿನ್ ಕ್ಸೇವಿಯರ್, ಆಡಳಿತಾಧಿಕಾರಿಗಳಾದ ಸಫ್ವಾನ್ ಪಿಲಿಕಲ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಫ್ಯಾನ್ಸಿ ಡ್ರೆಸ್, ನೃತ್ಯ, ಭಾಷಣ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮವನ್ನು 6ನೇ ತರಗತಿಯ ಆಯಿಷಾ ಮಿಫ್ರಾ ಸ್ವಾಗತಿಸಿದರು. 7ನೇ ತರಗತಿಯ ಜೋಯಾ ನಫೀಸಾ ಮತ್ತು ರಿದಾ ಫಾತಿಮಾ ಕಾರ್ಯಕ್ರಮ ನಿರೂಪಿಸಿದರು. 5ನೇ ತರಗತಿಯ ಮರಿಯಂ ಸಫಾ ವಂದಿಸಿದರು.