ನಿಡ್ಪಳ್ಳಿ: ಜೈ ಯುವಶಕ್ತಿ ಯುವಕ ಮಂಡಲ ತಂಬುತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 11 ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಗ್ಗ ಜಗ್ಗಾಟ ಮತ್ತು ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಆ.17 ರಂದು ಕರ್ನಪ್ಪಾಡಿ ಕೋಟಿ- ಚೆನ್ನಯ ಬ್ರಹ್ಮಬೈದರ್ಕಳ ಗರಡಿ ವಠಾರದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 9ಕ್ಕೆ ಮ್ಯಾರಥಾನ್ ಗೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಗೊಳ್ಳಲಿರುವುದು.ಬೆಳಿಗ್ಗೆ ಗಂಟೆ 11.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.ಶಾಲಾ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಯುವಕ ಮಂಡಲದ ಅಧ್ಯಕ್ಷ ಸುರೇಶ್ ಕಾನ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ