ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಂಘದ ಅಧ್ಯಕ್ಷರಾದ ಗಣೇಶ್ ಕೆ.ಎಸ್ ಉದನಡ್ಕರವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಯೋಧ ಬಾಲಕೃಷ್ಣ ಬಸ್ತಿಯವರು ಹಾಗೂ ಸಂಘದ ಮಾಜಿ ಅಧ್ಯಕ್ಷರಾದ ಧರ್ಮೇಂದ್ರ ಕಟ್ಟತ್ತಾರುರವರು ಶುಭ ಹಾರೈಸಿದರು. ಸಂಘದ ಮಾಜಿ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಕಾಣಿಯೂರು ಮಠದ ನಿಕಟ ಪೂರ್ವ ವ್ಯವಸ್ಥಾಪಕರಾದ ನಿರಂಜನ್ ಆಚಾರ್ ಕೆನ್ನಾರು, ಕಾಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಘು ಎನ್. ಬಿ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿ ಡಾ.ಆಶಾ ಅಭಿಕಾರ್, ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯ ಕ್ರಮದಲ್ಲಿ ನಿರ್ದೇಶಕರಾದ ಅನಂತಕುಮಾರ್ ಬೈಲಂಗಡಿ, ಪರಮೇಶ್ವರ ಗೌಡ ಅನಿಲ, ವಿಶ್ವನಾಥ ಕೂಡಿಗೆ, ಸುಂದರ ದೇವಸ್ಯ, ದಿವಾಕರ ಮರಕ್ಕಡ, ಲೋಕೇಶ್ ಅತಾಜೆ, ರಮೇಶ್ ಉಪ್ಪಡ್ಕ, ವೀಣಾ ಅಂಬುಲ, ಶೀಲಾವತಿ ಮುಗರಂಜ, ರತ್ನಾವತಿ ಮುದುವ, ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕಿ ಚಂದ್ರಾವತಿ ಅಭಿಕಾರ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ಮಾಜಿ ಅಧ್ಯಕ್ಷ ಧನಂಜಯ ಕೇನಾಜೆ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಚಾರ್ವಾಕ ಸಿ ಎ ಬ್ಯಾಂಕಿನ ಮಾಜಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳಾದ ವಾಣಿ, ಭವತ್, ವಸಂತಿ, ಪುನೀತ್, ದುರ್ಗಪ್ರಸಾದ್, ವಿನಯ್,ಕೀರ್ತಿ ಕುಮಾರ್, ವೇಣುಗೋಪಾಲ, ಸವಿತಾ ಕೇಶವ ,ವಿನೀತ್, ಸುಬ್ರಹ್ಮಣ್ಯ, ಈಶ್ವರ ಸಹಕರಿಸಿದರು. ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ಸ್ವಾಗತಿಸಿ, ಸಂಘದ ಸಿಇಒ ಅಶೋಕ್ ಗೌಡ ವಂದಿಸಿದರು.