ವಿಟ್ಲ: ಚೆಂಡುಕಳ ಅಂಗನವಾಡಿ ಕೇಂದ್ರದಲ್ಲಿ ಅಳಿಕೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಗೀತಾಲತಾ ಟಿ ಧ್ವಜಾರೋಹಣ ನೆರವೇರಿಸಿದರು.
ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಳಿಕೆ ಗ್ರಾ.ಪಂ. ಸದಸ್ಯರಾದ ಸೀತಾರಾಮ ಶೆಟ್ಟಿ, ಶಾಂಭವಿ, ರವೀಶ ಕೆ. ಪ್ರಮುಖರಾದ ಬಾಲಕೃಷ್ಣ ಪೂಜಾರಿ, ಮಮತಾ, ವಿರೂಪಾಕ್ಷ,ಅಂಗನವಾಡಿ ಕಾರ್ಯಕರ್ತೆ ವನಿತಾ, ಸಹಾಯಕಿ ಜಯಂತಿ ಮೊದಲಾದವರು ಉಪಸ್ಥಿತರಿದ್ದರು.