ಪಟ್ಟೆ ಬಡಗನ್ನೂರು: ಇಲ್ಲಿನ ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತೀಯ ಸೇನೆಯ ನಿವೃತ್ತ ಯೋಧ ಸುಬ್ಬಪ್ಪ ಪಾಟಾಳಿ ಇವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗಣ್ಯರಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸುಬ್ಬಪ್ಪ ಪಾಟಾಳಿ, ವಿದ್ಯಾರ್ಥಿಗಳಿಗೆ ದೇಶಪ್ರೇಮದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿದ್ಯಾಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್, ಸ್ವಾತಂತ್ರ್ಯಕ್ಕಾಗಿ ಮಡಿದ ವೀರರನ್ನು ಸ್ಮರಿಸಿ, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ, ಪ್ರೌಢ ಶಾಲಾ ವಿಭಾಗದ ಪೋಷಕ ಮಂಡಳಿಯ ಅಧ್ಯಕ್ಷ ಲಿಂಗಪ್ಪ ಗೌಡ ಮೂಡಿಕೆ, ಪ್ರಾಥಮಿಕ ವಿಭಾಗದ ಪೋಷಕ ಮಂಡಳಿಯ ಅಧ್ಯಕ್ಷ ಕೇಶವಪ್ರಸಾದ್ ನೀಲಗಿರಿ, ಆಂಗ್ಲ ಮಾಧ್ಯಮ ವಿಬಾಗದ ಪೋಷಕ ಮಂಡಳಿಯ ಅಧ್ಯಕ್ಷ ಸತೀಶ್ ಕೊಪ್ಪಳ, ಉಭಯ ಸಂಸ್ಥೆಗಳ ಮುಖ್ಯಗುರು ರಾಜಗೋಪಾಲ ಎನ್, ಸುಮನಾ ಬಿ ಉಪಸ್ಥಿತರಿದ್ದರು. ಎಂಟನೇ ತರಗತಿಯ ವಿದ್ಯಾರ್ಥಿನಿಲಾವಿಕ ಬಿ ರೈ ಸ್ವಾಗತಿಸಿದರು. ಐದನೇ ತರಗತಿಯ ವಿದ್ಯಾರ್ಥಿನಿ ರೂಪಶ್ರೀ ವಂದಿಸಿದರು. ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಶ್ರಾವ್ಯ ಬಿ ಕಾರ್ಯಕ್ರಮವನ್ನು ನಿರೂಪಿಸಿದರು.