ಅರಿಯಡ್ಕ: ಅರಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ ನೆರವೇರಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಮೀನಾಕ್ಷಿ ಪಾಪೆ ಮಜಲು, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಮಾಜಿ ಪಂಚಾಯತ್ ಸದಸ್ಯರು, ಅಂಗನವಾಡಿ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.