ಕಾಣಿಯೂರು: ಸರಕಾರಿ ಪ್ರೌಢ ಶಾಲೆ ದೋಳ್ಪಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಪ್ರಮೀಳ ಜಯಚಂದ್ರ ಇವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.
ಗ್ರಾಮ ಪಂಚಾಯತ್ ಸದಸ್ಯ ಲೋಕಯ್ಯ ಪರವ, ಗ್ರಾಮ ಅಭಿವೃದ್ಧಿ ಯೋಜನೆಯ ಒಕ್ಕೂಟ ಅಧ್ಯಕ್ಷ ಸುಬ್ರಹ್ಮಣ್ಯ ಕೂರೇಲು ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು. ಶಾಲಾ ಶಿಕ್ಷಕರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ವಿದ್ಯಾಭಿಮಾನಿ ಉಮೇಶ್ ಆಚಾರ್ಯ ಇವರು ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಯಲ್ಲಿ ಪ್ರಥಮ ಹಾಗೂ ದ್ವಿತೀಯ ಬಂದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ನಿಂತಿಕಲ್ ಐಟಿಐ ದತ್ತಿನಿದಿಯಿಂದ ಹಾಗೂ ವಿದ್ಯಾರ್ಥಿ ಕ್ಷೇಮ ನಿಧಿಯಿಂದ ಕಳೆದ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ದ್ವಿತೀಯ ನಗದು ಬಹುಮಾನವನ್ನು ನೀಡಲಾಯಿತು. ದೈಹಿಕ ಶಿಕ್ಷಣ ಶಿಕ್ಷಕಿ ವಿನೋದ ಯಂ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯ ಗುರು ರವಿರಾಜ ಮೊಳೆಯರ್ ಸ್ವಾಗತಿಸಿದರು. ಗಣಿತ ಶಿಕ್ಷಕಿಯಾದ ಉಷಾ ದೇವಿ ವಂದಿಸಿದರು.