ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಬ್ರ ಬ್ಲಾಕ್ ಸಮಿತಿ ವತಿಯಿಂದ ಕುಂಬ್ರ ಜಂಕ್ಷನ್ ನಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಕುಂಬ್ರ ಬ್ಲಾಕ್ ಅಧ್ಯಕ್ಷರಾದ ರಿಯಾಝ್ ಬಳಕ್ಕರವರು ಧ್ವಜಾರೋಹಣಗೈದು ಸಂದೇಶ ಮಾತುಗಳನ್ನಾಡಿದರು. ಅತಿಥಿಯಾಗಿ ಆಗಮಿಸಿದ ಮಾನವ ಹಕ್ಕುಗಳ ಸಂಘಟನೆಯ ಪುತ್ತೂರು ತಾಲೂಕು ಅಧ್ಯಕ್ಷರಾದ ಅಬ್ಬಾಸ್ ಗೂನಡ್ಕ ರವರು ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಕುಂಬ್ರ ಬ್ಲಾಕ್ ಉಪಾಧ್ಯಕ್ಷರಾದ ಅಶ್ರಫ್ ಎಚ್.ಇ, ಆರ್ಯಾಪು ಗ್ರಾಮ ಸಮಿತಿ ಅಧ್ಯಕ್ಷರಾದ ಬಶೀರ್ ವಾಗ್ಲೆ ಉಪಸ್ಥಿತರಿದ್ದರು. ಬ್ಲಾಕ್ ಕಾರ್ಯದರ್ಶಿ ಇರ್ಶಾದ್ ಜಾರತ್ತಾರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.