ಪುತ್ತೂರು: ದರ್ಬೆ ಪಾಂಗ್ಳಾಯಿ, ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾಜಿ ಸೈನಿಕ ಎಡ್ವರ್ಡ್ ಡಿ’ಸೋಜಾ ಧ್ವಜಾರೋಹಣ ನೆರವೇರಿಸಿದರು.
ಶಾಲೆಯ ಹಳೆಯ ವಿದ್ಯಾರ್ಥಿನಿ ಅನುಶ್ರೀ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದರು. ನಂತರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೈದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ರಘುನಾಥ ರೈ ಮತ್ತು ಮಕ್ಕಳ ಸುರಕ್ಷತಾ ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ಶಾಫಿ ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾ ಸ್ವಾತಂತ್ರ್ಯ ದಿನದ ಮಹತ್ವ ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳಾದ ಪ್ರಖ್ಯಾತ್ ಕೋಟ್ಯಾನ್ ಮತ್ತು ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು. ನಿಹಾರಿಕಾ ಸ್ವಾಗತಿಸಿ, ಚಂದನ್ ಕೃಷ್ಣ ವಂದಿಸಿದರು. ನಂತರ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ದೇಶಭಕ್ತಿ ಗೀತೆಗಳು ಎಲ್ಲರ ಗಮನ ಸೆಳೆದವು.