ಕಾಣಿಯೂರು: ಕಾಣಿಯೂರು ಸ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜರೋಹಣವನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ ನೆರವೇರಿಸಿದರು. ಬಳಿಕ ಭಾರಾತಾತಂಭೆಯ ವೇಷ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರ ವೇಷಗಳೊಂದಿಗೆ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ವಸಂತ ಪೆರ್ಲೊಡಿ, ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಗೌರಿ ಮಾದೋಡಿ, ಹರಿಣಾಕ್ಷಿ ಬನಾರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾರ್ಯದರ್ಶಿ ರವೀಂದ್ರ ಅನಿಲ, ಕೋಶಾಧಿಕಾರಿ ರಾಜೇಶ್ ಮೀಜೆ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋಧ ನೇರೋಳ್ತಡ್ಕ, ನಿವೃತ್ತ ಸೈನಿಕ ಬಾಲಕೃಷ್ಣ ಕೆ ಬಸ್ತಿ, ಕಾಣಿಯೂರು ಕ್ಳಸ್ಟರ್ ಸಿ ಆರ್ ಪಿ ಯಶೋಧ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಧರ್ಮೆಂದ್ರ ಕಟ್ಟತ್ತಾರು, ಅಂಗನವಾಡಿ ಕಾರ್ಯಕರ್ತೆ ಜಯಶ್ರೀ, ಪುಟ್ಟಣ್ಣ ಗೌಡ ಮುಗರಂಜ, ಲಕ್ಷ್ಮಣ ಗೌಡ ಮುಗರಂಜ ಉಪಸ್ಥಿತರಿದ್ದರು. ಮಕ್ಕಳಿಂದ, ಭಾಷಣ, ದೇಶಭಕ್ತಿ ಗೀತೆ, ನೃತ್ಯ ಮುಂತಾದ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು, ಶಾಲಾ ಮುಖ್ಯಗುರು ಬಾಲಕೃಷ್ಣ ಸ್ವಾಗತಿಸಿದರು. ಸುಜಯ ಕಾರ್ಯಕ್ರಮ ನಿರೂಪಿಸಿದರು. ರಶ್ಮಿ ವಂದಿಸಿದರು. ಅಧ್ಯಾಪಕರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.