ಪುತ್ತೂರು: ಪುತ್ತೂರು ಶ್ರೀರಾಮಕೃಷ್ಣ ಸೇವಾ ಸಮಾಜದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಶ್ರೀರಾಮಕೃಷ್ಣ ಸೇವಾಶ್ರಮದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ನ್ಯಾಯವಾದಿ ಹಾಗೂ ಶ್ರೀರಾಮಕೃಷ್ಣ ಸೇವಾ ಸಮಾಜದ ಅಧ್ಯಕ್ಷ ಎನ್. ಸುಬ್ರಹ್ಮಣ್ಯಂ ಕೊಳತ್ತಾಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಶ್ರೀರಾಮಕೃಷ್ಣ ಸೇವಾ ಸಮಾಜದ ಉಪಾಧ್ಯಕ್ಷೆ ಡಾ. ಗೌರಿ ಪೈ ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ| ಆರ್. ವೇದವ್ಯಾಸ್ ಭಾಗವಹಿಸಿದ್ದರು. ಪುತ್ತೂರು ಛೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಪಿ. ವಾಮನ ಪೈ ಅಧ್ಯಕ್ಷತೆ ವಹಿಸಿದ್ದರು. ಶ್ರೀರಾಮಕೃಷ್ಣ ಸೇವಾ ಸಮಾಜದ ಉಪಾಧ್ಯಕ್ಷೆ ಡಾ. ಗೌರಿ ಪೈ ಸಹ ಕಾರ್ಯದರ್ಶಿ ವತ್ಸಲಾ ರಾಜ್ಞಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.