ಪುತ್ತೂರು: ಬಿಎಂಎಸ್ ಆಟೋರಿಕ್ಷಾ ಚಾಲಕರ ಮಾಲಕರ ಸಂಘದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಘದ ಗೌರವ ಸಲಹೆಗಾರ ಸಂತೋಷ್ ಕುಮಾರ್ ರೈ ಕೈಕಾರ ಅವರು ಧ್ವಜಾರೋಹಣ ಮಾಡುವ ಮೂಲಕ ಆಚರಿಸಲಾಯಿತು.
ಸಂಘದ ಅಧ್ಯಕ್ಷ ರಾಜೇಶ್ ಮರಿಯಲ್ ಅಧ್ಯಕ್ಷತೆ ವಹಿಸಿದ್ದರು. ಬಿಎಂಎಸ್ ಸೌಹಾರ್ದ ಸಹಕಾರಿಯ ಅಧ್ಯಕ್ಷ ಸುರೇಶ್ ಸುಧಾಕರ್ ನಾಯಕ್ ಮಾಜಿ ಗೌರವ ಅಧ್ಯಕ್ಷ ಬಿಕೆ ದೇವಪ್ಪ ಗೌಡ, ಮಾಜಿ ಅಧ್ಯಕ್ಷ ಹುಸೇನ್ ಜಿ ರವರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಸತೀಶ್ ಪ್ರಭು ಮಣಿಯು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮಾಜಿ ಕಾರ್ಯದರ್ಶಿ ಮಹೇಶ್ ಮಣಿಯವರು ವಂದಿಸಿದರು.