ರಾಮಕುಂಜ: ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿಯ ಅಧ್ಯಕ್ಷ ಎಸ್. ಅಬ್ದುಲ್ ರಹಿಮಾನ್ ನೆರವೇರಿಸಿದರು.
ಮಸೀದಿ ಖತೀಬ್ ಅಬ್ದುಲ್ ರಜಾಕ್ ಸುಲ್ತಾನ್ ದಾರಿಮಿ, ಸದರ್ ಮುಅಲ್ಲಿಂ ಶರೀಫ್ ದಾರಿಮಿ, ಮುಅದ್ದಿಂ ಶರೀಫ್ ಬಶೀರ್ ದಾರಿಮಿ, ಮಸೀದಿ ಸಮಿತಿ ಕಾರ್ಯದರ್ಶಿ ಝಿಯಾದ್, ಉಪಾಧ್ಯಕ್ಷ ಮಹಮ್ಮದ್ ರಫೀಕ್, ಜೊತೆ ಕಾರ್ಯದರ್ಶಿ ಅಬ್ದುಲ್ ರಜಾಕ್, ನುಜೂಮುಲ್ ಇಸ್ಲಾಂ ಯಂಗ್ಮೆನ್ಸ್ ಅಧ್ಯಕ್ಷ ಪಿ. ಅಬ್ದುಲ್ ಲತೀಫ್, ಎಸ್.ಕೆ.ಎಸ್.ಎಸ್.ಎಫ್.ನ ಇಸಾಕ್ ಬೊಲುಂಬುಡ, ಎಸ್.ಪಿ. ಖಲಂದರ್, ರಜಾಕ್ ಮುಸ್ಲಿಯಾರ್ ಮತ್ತಿತರರು ಉಪಸ್ಥಿತರಿದ್ದರು.