ಉಪ್ಪಿನಂಗಡಿ: ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಸಂಘದ ಅಧ್ಯಕ್ಷರಾದ ಸುನೀಲ್ ಕುಮಾರ್ ದಡ್ಡುರವರು 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದರು.
ಬಳಿಕ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದ ಅವರು, ಹಲವರ ಬಲಿದಾನ, ಲಕ್ಷಾಂತರ ಮಂದಿ ಭಾರತೀಯರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಆದ್ದರಿಂದ ನಾಗರಿಕರಾದ ನಾವು ಸಮಾಜದ ಹಿತ ಹಾಗೂ ರಾಷ್ಟ್ರೀಯ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಕಾರ್ಯಗಳನ್ನು ಮಾಡಿದಾಗ ದೇಶ ಸದೃಢವಾಗುತ್ತದೆ. ಹಾಗಾಗಿ ಸ್ವಾತಂತ್ರ್ಯದ ಗೌರವ ಹಾಗೂ ಮೌಲ್ಯವನ್ನು ಉಳಿಸಿ, ಬೆಳೆಸುವ ಕರ್ತವ್ಯ ನಮ್ಮ ಮೇಲೆ ಇದೆ ಎಂದರು.
ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ದಯಾನಂದ ಸರೋಳಿ, ನಿರ್ದೇಶಕರಾದ ವಸಂತ ಗೌಡ ಪಿ., ರಾಘವ ನಾಯ್ಕ, ಶ್ರೀರಾಮ ಪಾತಾಳ, ಸುಂದರ ಕೆ., ಉಷಾಚಂದ್ರ ಮುಳಿಯ, ಸಂಧ್ಯಾ ಪೊರೋಳಿ, ಸುಬ್ರಹ್ಮಣ್ಯ ಕುಮಾರ್ ಅಗರ್ತ, ರಾಜೇಶ್, ಶ್ರೀಮತಿ ಗೀತಾ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಶೋಭಾ ಕೆ. ಸ್ವಾಗತಿಸಿದರು. ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಷ್ಪರಾಜ ಶೆಟ್ಟಿ ವಂದಿಸಿದರು. ಸಿಬ್ಬಂದಿ ಚಂದ್ರಶೇಖರ ಡಿ.ಎಸ್. ಕಾರ್ಯಕ್ರಮ ನಿರೂಪಿಸಿದರು.