ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ನಾಯಕ್ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದರು.
ಬಳಿಕ ರಾಧಾಕೃಷ್ಣ ನಾಯಕ್ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯ ಕೃಷ್ಣರಾವ್ ಆರ್ತಿಲ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸೋಮನಾಥ, ದೇವದಾಸ್ ರೈ, ವೆಂಕಪ್ಪ ಪೂಜಾರಿ ಮರುವೇಲು, ದೇವಾಲಯದ ಪ್ರಧಾನ ಅರ್ಚಕರಾದ ವೇ.ಮೂ. ಹರೀಶ ಉಪಾಧ್ಯಾಯ, ಸ್ಯಾಕ್ಸೋಫೋನ್ ವಾದಕ ಕೃಷ್ಣಪ್ಪ ದೇವಾಡಿಗ, ಸಿಬ್ಬಂದಿ ಕೃಷ್ಣಪ್ರಸಾದ್ ಬಡಿಲ, ದಿವಾಕರ, ಸುಧಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.