ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಪುತ್ತೂರು ಗ್ರಾಮಾಂತರ ವೃತ್ತದ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೆರವೇರಿಸಿದರು.
ವಿದ್ಯಾರ್ಥಿ ಹೃಷಿಕೇಶ್ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನಗೈದ ರಾಷ್ಟ್ರ ಪ್ರೇಮಿಗಳನ್ನು ಸ್ಮರಿಸಿದರು. ಸಹ ಶಿಕ್ಷಕಿ ಅನಿತಾ ಸೀಕ್ವೇರಾ ಸ್ವಾತಂತ್ರ್ಯದ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಕರುಣಾಕರ ಸುವರ್ಣ, ಸಂಚಾಲಕರಾದ ಸುಬ್ರಹ್ಮಣ್ಯ ಭಟ್ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಚ್.ಕೆ. ಪ್ರಕಾಶ್, ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್, ಉಪನ್ಯಾಸಕರ ವೃಂದ, ಪೋಷಕರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧೃನಿತಾ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.