ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಸದ್ಭುದ್ಧಿಗಾಗಿ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಹಣತೆ ಬೆಳಗಿ ಸಾಮೂಹಿಕ ಪ್ರಾರ್ಥನೆ

0

ರಾಮಕುಂಜ: ಸನಾತನ ಹಿಂದೂ ಧರ್ಮ ಸಂರಕ್ಷಣೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವ ಕುತಂತ್ರಿಗಳಿಗೆ ಸದ್ಭುದ್ದಿಗಾಗಿ ಹಾಗೂ ಶ್ರೀ ಧರ್ಮಸ್ಥಳ ಕ್ಷೇತ್ರದ ಮೇಲಿನ ಕಳಂಕ ನಿವಾರಣೆಗಾಗಿ ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಆ.15ರಂದು ಸಂಜೆ ಹಣತೆ ಬೆಳಗಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತ ಉಡುಪ ಅವರು ಪೂಜೆ, ಪ್ರಾರ್ಥನೆ ನೆರವೇರಿಸಿದರು. ದೇವಸ್ಥಾನದ ಪವಿತ್ರಪಾಣಿ ನರಹರಿ ಉಪಾಧ್ಯಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಗುರುಪ್ರಸಾದ ರಾಮಕುಂಜ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಊರಿನ ಪ್ರಮುಖರು, ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here