ಪುತ್ತೂರು: ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ರಸ್ತೆಯ ಶ್ರೀ ಗುರುಕೃಪಾದಲ್ಲಿ ಆಡಳಿತ ಕಭೇರಿ ಹೊಂದಿದ್ದು, ಪುತ್ತೂರಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಬಳಿಯ ಶ್ರೀ ಕೃಷ್ಣಾ ಆರ್ಕೇಡ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇದೀಗ ಬ್ಯಾಂಕ್ ನೂರನೇ ವರ್ಷದತ್ತ ಮುನ್ನುಗ್ಗುತ್ತಿದ್ದು ಈ ಸಂದರ್ಭದಲ್ಲಿ ಗ್ರಾಹಕರ ಹೆಚ್ಚಿನ ಅನುಕೂಲತೆಗೋಸ್ಕರ ಎಪಿಎಂಸಿ ಆದರ್ಶ ಆಸ್ಪತ್ರೆ ಎದುರಿನ ತ್ರಿನೇತ್ರ ಕಾಂಪ್ಲೆಕ್ಸ್ ನ ಒಂದನೇ ಮಹಡಿಗೆ ಸ್ಥಳಾಂತರಗೊಂಡು ಆ.17ರಂದು ಶುಭಾರಂಭಗೊಳ್ಳಲಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈರವರು ಸ್ಥಳಾಂತರಗೊಂಡ ಬ್ಯಾಂಕ್ ಅನ್ನು ಉದ್ಘಾಟಿಸಲಿದ್ದಾರೆ. ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಲಿ. ಇದರ ಅಧ್ಯಕ್ಷ ಚಂದ್ರಶೇಖರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಮಂಗಳೂರು ದ.ಕ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕ ಹೆಚ್.ಎನ್ ರಮೇಶ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಪುತ್ತೂರು ಆದರ್ಶ ಆಸ್ಪತ್ರೆಯ ಸರ್ಜನ್ ಡಾ.ಎಂ.ಕೆ ಪ್ರಸಾದ್ ಭಂಡಾರಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಉಪ್ಪಿನಂಗಡಿ ಗಿರಿಜಾ ದಂತ ಚಿಕಿತ್ಸಾಲಯದ ವೈದ್ಯ ಡಾ.ರಾಜಾರಾಮ್ ಕೆ.ಬಿ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಪರ್ಪುಂಜ ರಾಮಜಾಲು ಗರಡಿ ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲು, ದ.ಕ ಜಿಲ್ಲಾ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಲಿ.ನ ಮಾಜಿ ನಿರ್ದೇಶಕ ವಿಜಯಕುಮಾರ್ ಸೊರಕೆ, ಬ್ಯಾಂಕ್ ಆಫ್ ಬರೋಡಾದ ಚೀಫ್ ಮ್ಯಾನೇಜರ್ ಅನುಭವ್ ಶ್ರೀವಾಸ್ತವ್ ರವರು ಭಾಗವಹಿಸಲಿದ್ದಾರೆ ಎಂದು ಶ್ರೀ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ ಕುಮಾರ್, ಉಪಾಧ್ಯಕ್ಷ ಜಯರಾಮ್ ಪೂಜಾರಿ, ಪ್ರಧಾನ ವ್ಯವಸ್ಥಾಪಕಿ(ಪ್ರಭಾರ) ವಿಜಯ ಎಂ.ಕೋಟ್ಯಾನ್, ಶಾಖಾಧಿಕಾರಿ(ಪ್ರಭಾರ) ಆನಂದ ಪಿ ಹಾಗೂ ನಿರ್ದೇಶಕ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.