ಹನುಮಗಿರಿ:ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ನನ್ಯ ಅಚುತ್ತ ಮೂಡತ್ತಾಯ ದ್ವಜಾರೋಹಣ ನೆರವೇರಿಸಿ ಅಧ್ಯಕ್ಷ ನುಡಿಗಳನ್ನಾಡಿದರು. ಪ್ರಾಂಶುಪಾಲ ಕೆ ಶಾಮಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಚಾಲಕ ಶಿವರಾಂ ಪಿ ಮುಖ್ಯ ಶಿಕ್ಷಕಿಯರಾದ ಸೌಮ್ಯ ಎ ಮತ್ತು ಲತಾ ಡಿ ಕೆ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಹಾಗೂ ಆಡಳಿತ ಮಂಡಳಿಯ ಸದಸ್ಯರು,ಶಿಕ್ಷಕ ರಕ್ಷಕ ಸಂಘದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಬಳಿಕ ಶ್ರೀ ಕೃಷ್ಣವೇಷ ಧರಿಸಿದ ಮಗುವನ್ನು ತೊಟ್ಟಿಲಲ್ಲಿ ತೂಗಿ ಶ್ರೀ ಕೃಷ್ಣನ ತೊಟ್ಟಿಲ ಶಾಸ್ತ್ರ ನೇರವೇರಿಸಲಾಯಿತು. ಶ್ರೀಕೃಷ್ಣ ವೇಷಧರಿಸಿದ ಎಲ್ಲಾ ಮಕ್ಕಳಿಗೂ ಸಂಸ್ಥೆಯ ವತಿಯಿಂದ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. ನಂತರ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಜೇಂದ್ರ ಪ್ರಸಾದ್ ಕೃಷ್ಣ ಜನ್ಮಾಷ್ಟಮಿಯ ವಿಶೇಷತೆ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು.ಸಭಾಧ್ಯಕ್ಷತೆಯನ್ನು ವಹಿಸಿದ ಶಾಲಾ ಸಂಚಾಲಕರಾದ ಶಿವರಾಂ ಪಿ ರವರು ಅಧ್ಯಕ್ಷೀಯ ನುಡಿಗಳನ್ನಾಡಿದರು.ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಶಿಕ್ಷಕಿ ರಾಜಶ್ರೀ ಮತ್ತು ಶ್ರೀಮತಿ ಸೌಮ್ಯ ಎಂ ನಿರೂಪಿಸಿದರು. ಸಂಸ್ಥೆಯ ಶಿಕ್ಷಕಿ ಮಾಲಿನಿ ಸ್ವಾಗತಿಸಿ, ಹರ್ಷಿತ ವಂದಿಸಿದರು.