ಕಾಣಿಯೂರು: ಉಜ್ವಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಾಣಿಯೂರು ಇದರ ೨೦೨೪-೨೫ ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಆಟಿ ಕೂಟ ಕಾರ್ಯಕ್ರಮವು ಕಾಣಿಯೂರು ಗ್ರಾಮ ಪಂಚಾಯತ್ ಕಣ್ವರ್ಷಿ ಸಭಾಭವನದಲ್ಲಿ ಆ.೧೪ರಂದು ನಡೆಯಿತು.
ಕಾರ್ಯಕ್ರಮವನ್ನು ಉಜ್ವಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷೆ ಚಂದ್ರಾವತಿ ರೈ ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಎನ್ಆರ್ಎಲ್ಎಂ ಯೋಜನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್ ಕೆ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಘು ಎನ್.ಬಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ, ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ನಿಶಾಪ್ರಿಯಾ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಆಶಾ ಅಭಿಕಾರ್ ಶುಭಹಾರೈಸಿದರು. ಉಜ್ವಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಉಪಾಧ್ಯಕ್ಷೆ ಚೆನ್ನಮ್ಮ, ಕಾರ್ಯದರ್ಶಿ ಉಷಾ, ಜತೆ ಕಾರ್ಯದರ್ಶಿ ನಿರ್ಮಲಾ, ಕೋಶಾಧಿಕಾರಿ ಚಂದ್ರಕಲಾ ಬಿ.ಎನ್, ಪದಾಧಿಕಾರಿಗಳಾದ ಚೇತನಾ, ಹೇಮಲತಾ, ಅಪೂರ್ವ, ರತ್ನಾವತಿ, ಗುಣವತಿ, ಚಂದ್ರಾವತಿ, ದಿವ್ಯ, ಕುಸುಮಾವತಿ, ಉಮಾವತಿ, ವನಿತಾ, ರಮಾದೇವಿ, ಕುಸುಮ ಉಪಸ್ಥಿತರಿದ್ದರು. ಬಿ.ಲೀಲಾವತಿ ಪ್ರಾರ್ಥಿಸಿದರು.

ಒಕ್ಕೂಟದ ಕಾರ್ಯದರ್ಶಿ ಉಷಾ 2024- 25 ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿ, ಒಕ್ಕೂಟದ ಕೋಶಾಧಿಕಾರಿ ಚಂದ್ರಕಲಾ ಜಮಾ ಖರ್ಚು ಸಂದಾಯ ವಿವರಗಳನ್ನು ವಾಚಿಸಿದರು. ಚಂದ್ರಿಕಾ ವಂದಿಸಿದರು. ವಿನುತಾ ರೈ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಆಟಿಕೂಟದಲ್ಲಿ ನಡೆಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಉತ್ತಮ ಹೈನುಗಾರಿಕೆ ಮತ್ತು ಕೃಷಿಯೇತರ ಚಟುವಟಿಕೆಗಳಲ್ಲಿ ಆರ್ಥಿಕವಾಗಿ ಸದೃಢರಾಗಿರುವ ಕೃಷಿ ಮಹಿಳೆಯನ್ನು ಗುರುತಿಸಿ ಬಹುಮಾನವನ್ನು ವಿತರಿಸಲಾಯಿತು. ಉತ್ತಮ ಸಂಘಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು. ಪಶು ಸಖಿ ಲೀಲಾವತಿಯವರು ಉತ್ತಮ ಹೈನುಗಾರಿಕೆ ಮಾಡುವವರನ್ನು ಗುರುತಿಸಿ ಬಹುಮಾನ ನೀಡಲಾಯಿತು ಹಾಗೂ ಕೃಷಿ ಸಖಿ ಮನೋರಮ ಸಮಗ್ರ ಕೃಷಿ ಮಾಡುವವರನ್ನು ಗುರುತಿಸಿ ಬಹುಮಾನ ನೀಡಲಾಯಿತು.
ಆರೋಗ್ಯ ತಪಾಸಣೆ ಶಿಬಿರವನ್ನು ನಡೆಸಲಾಯಿತು. ಹಳೆಯ ಕಾಲದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.
ಪ್ರತಿಜ್ಞಾ ವಿಧಿ ಸ್ವೀಕಾರ
ಮಾದಕ ಮುಕ್ತ ಕರ್ನಾಟಕ ಅಭಿಯಾದ ಮಾದಕ ವಸ್ತು ನಿರ್ಮೂಲನೆ ಮತ್ತು ಮಾದಕ ವಸ್ತುಗಳ ಬಳಕೆಯಿಂದಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಸ್ವಚ್ಛತೆಯ ಪ್ರತಿಜ್ಞಾವಿಧಿಯನ್ನು ಮಾಡಲಾಯಿತು. ಎನ್ಆರ್ಎಲ್ಎಂ ಯೋಜನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್ ಕೆ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.