ಪುತ್ತೂರು: ತಾಲೂಕು ಬಂಟರ ಸಂಘದ ಸಾರಥ್ಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ವಿಭಾಗ, ಯುವ ಬಂಟರ ವಿಭಾಗ, ವಿದ್ಯಾರ್ಥಿ ಬಂಟರ ವಿಭಾಗದ ಸಹಕಾರದೊಂದಿಗೆ ಪ್ರಪ್ರಥಮ ಬಾರಿಗೆ “ಬಂಟೆರೆ ಕೆಸರ್‌ಡ್ ಒಂಜಿ ಕುಸಲ್” ಆಟೋಟ ಸ್ಪರ್ಧೆಗಳು ಆ.17 ರಂದು ಬೆಳಿಗ್ಗೆಯಿಂದ ಸಂಜೆ ತನಕ ಕೈಕಾರ ಪನಡ್ಕ ಪಳ್ಳತ್ತಾರು ಶ್ರೀ ಜುಮಾದಿ ದೈವಸ್ಥಾನದ ಹತ್ತಿರ ಸರಸ್ವತಿ ಹೊಸಲಕ್ಕೆ ಇವರ ಗದ್ದೆಯಲ್ಲಿ ಜರಗಲಿದೆ.
ಬೆಳಿಗ್ಗೆ ಗಂಟೆ 9 ಕ್ಕೆ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈರವರು ನೇರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಆರ್ಯಭಟ ಪ್ರಶಸ್ತಿ ಪುರಸ್ಕೃತರಾದ ಉದ್ಯಮಿ ಕೆ.ಕೆ.ಶೆಟ್ಟಿ, ಕುಸ್ತಿ ಫೆಡರೇಶನ್‌ನ ರಾಷ್ಟ್ರೀಯ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ, ಬ್ಯಾಂಕ್ ಅಫ್ ಬರೋಡಾ ಪುತ್ತೂರಿನ ಪ್ರಭಾರ ಕರೆನ್ಸಿ ಚೆಸ್ಟ್ ಅವಿನಾಶ್ ಚೌಟ, ಬೈಲುಗುತ್ತು ಮಾರಪ್ಪ ಶೆಟ್ಟಿ, ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ, ಮಾಜಿ ಶಾಸಕರುಗಳಾದ ಮಲ್ಲಿಕಾ ಪ್ರಸಾದ್, ಶಕುಂತಲಾ ಟಿ. ಶೆಟ್ಟಿ ಸೇರಿದಂತೆ ಹಲವು ಮಂದಿಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ಗಂಟೆ 5 ರಿಂದ ಸಮಾರೋಪ ಸಮಾರಂಭದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬಂಟ ಸಮಾಜದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ರೀತಿಯ ಆಟೋಟ ಸ್ವರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್‍ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಹಾಗೂ “ಬಂಟೆರೆ ಕೆಸರ್‌ಡ್ ಒಂಜಿ ಕುಸಲ್” ಸಮಿತಿಯ ಸಂಚಾಲಕ ದಯಾನಂದ ರೈ ಕೋರ್ಮಂಡ, ಅಧ್ಯಕ್ಷ ಸೀತಾರಾಮ ರೈ ಕೈಕಾರ, ಕಾರ್‍ಯದರ್ಶಿ ಪ್ರಜ್ವಲ್ ರೈ ತೊಟ್ಲ ಹಾಗೂ ಸಮಿತಿಯ ಗೌರವ ಸಲಹೆಗಾರರು ಮತ್ತು ಸದಸ್ಯರುಗಳು ತಿಳಿಸಿದ್ದಾರೆ.