ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸುಳ್ಯಪದವು ಶಾಖೆಯ ನೂತನ ಕಛೇರಿ ‘ಪ್ರಕೃತಿ ಸಹಕಾರ ಸೌಧ’ ಕಟ್ಟಡದ ಉದ್ಘಾಟನಾ ಸಮಾರಂಭ ಆ.21 ರಂದು ಬೆಳಿಗ್ಗೆ ನಡೆಯಲಿದೆ. ಪ್ರಕೃತಿ ಸಹಕಾರ ಸೌಧದ ಉದ್ಘಾಟನೆಯನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟರವರು ನೆರವೇರಿಸಲಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ಆಡಳಿತ ಕಛೇರಿಯನ್ನು ಉದ್ಘಾಟಿಸಲಿದ್ದು, ರಸಗೊಬ್ಬರ ಗೋದಾಮು ಅನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ದ.ಕ ಜಿಲ್ಲಾ ಸಹಕಾರಿ ಯೂನಿಯನ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಉದ್ಘಾಟಿಸಲಿದ್ದು ನ್ಯಾಯಬೆಲೆ ಅಂಗಡಿಯನ್ನು ವಿಧಾನ ಪರಿಷತ್ತು ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಜಯರಾಮ ರೈ ಎಸ್.ಬಿ, ಪುತ್ತೂರು ಉಪ ವಿಭಾಗದ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ರಘು ಎಸ್.ಎಂ, ಬಡಗನ್ನೂರು ಗ್ರಾಪಂ ಅಧಕ್ಷೆ ಪುಷ್ಪಲತಾ ದೇವಕಜೆ, ಪ್ರಗರಿಪರ ಕೃಷಿಕ ರಾಮ ಭಟ್ ಬೀರಮೂಲೆ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಸುಳ್ಯಪದವು ಸರ್ವೊದಯ ಪ್ರೌಢ ಶಾಲೆಯ ಸಂಚಾಲಕ ಮಹಾದೇವ ಭಟ್ ಕೊಲ್ಯ, ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಸತೀಶ್ ರೈ ಕಟ್ಟಾವು, ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಚಂದುಕೂಡ್ಲು ಶ್ರೀನಿವಾಸ ಭಟ್,ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ಶೇಷಪ್ಪ ಪೂಜಾರಿ ಕಡಮಗದ್ದೆ, ಬಡಗನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ಪಿ ಸುಬ್ಬಯ್ಯ, ಸುಳ್ಯಪದವು ಶ್ರೀ ಕೊರಗಜ್ಜ ಸೇವಾ ಸಮಿತಿ ಶಬರಿನಗರ ಇದರ ಅಧ್ಯಕ್ಷ ಬೆಳ್ಳಿಯಪ್ಪ ಗೌಡ, ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರ ಆರಾಧನಾ ಸಮಿತಿ ಟ್ರಸ್ಟ್ ಅಧ್ಯಕ್ಷ ಶ್ರೀಪತಿ ಭಟ್ ಇಂದಾಜೆ, ಸುಳ್ಯಪದವು ಆಯುಧ ಪೂಜಾ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಕನ್ನಡ್ಕ, ಸುಳ್ಯಪದವು ಯುವಶಕ್ತಿ ಕಲಾ ಮತ್ತು ಕ್ರೀಡಾ ಬಳಗದ ಅಧ್ಯಕ್ಷ ಗುರುಕಿರಣ್ ರೈ ಎನ್.ಜಿ ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ವಹಿಸಿಕೊಳ್ಳಲಿದ್ದಾರೆ. ಸಹಕಾರಿ ಬಂಧುಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಉಪಾಧ್ಯಕ್ಷ ಸೂರ್ಯನಾರಾಯಣ ಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್, ನಿರ್ದೇಶಕರುಗಳಾದ ಉಮೇಶ್ ಗೌಡ ಕೆ.ಕನ್ನಯ, ವಿನೋದ್ ಶೆಟ್ಟಿ ಅರಿಯಡ್ಕ, ರಾಜೀವಿ ಎಸ್.ರೈ ಕುಂಬ್ರ, ಮಲ್ಲಿಕಾ ಎ.ಜೆ ಆಲಂತ್ತಡ್ಕ,ಅಮರನಾಥ ರೈ ಐಂಬಾಗಿಲು, ಸತೀಶ್ ಕರ್ಕೆರ ಮಡ್ಯಂಗಳ, ಶಿವರಾಮ ಬಿ.ಬೊಳ್ಳಾಡಿ, ಸಂತೋಷ್ ಆಳ್ವ ಎ.ಸಿ, ಶ್ರೀನಿವಾಸ ಪ್ರಸಾದ್ ಮುಡಾಲ, ವಸಂತ ಕುಮಾರ್ ಕೌಡಿಚ್ಚಾರ್, ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ವಲಯ ಮೇಲ್ವಿಚಾರಕ ಶರತ್ ಡಿ ಮತ್ತು ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದವರ ಪ್ರಕಟಣೆ ತಿಳಿಸಿದೆ.