ಪುತ್ತೂರು: ಸೈಂಟ್ ಆಂಟನೀಸ್ ಪ್ರೌಢ ಶಾಲೆ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನಲ್ಲಿ ದೇಶದ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ರಾಜಕೀಯ ಮುಂದಾಳು, ಸಾಮಾಜಿಕ ಕಾರ್ಯಕರ್ತ ಜಿ.ಕೃಷ್ಣಪ್ಪ ಧ್ವಜಾರೋಹಣಗೈದು, ಮಾತನಾಡಿ ದೇಶದ ಸ್ವಾತಂತ್ರ್ಯ ಕ್ಕಾಗಿ ಹಲವಾರು ವೀರರು ಪ್ರಾಣ ಬಲಿದಾನ ನೀಡಿದ್ದಾರೆ.ಅವರೆಲ್ಲರನ್ನು ಸ್ಮರಿಸುವ ಕರ್ತವ್ಯ ನಮ್ಮದಾಗಬೇಕು .ದೇಶದ ಗಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ರೋಮಾಂಚಕಾರಿಯಾಗಿರುತ್ತದೆ ಅದನ್ನು ದೇಶವಾಸಿಗಳು ನೋಡಲೇ ಬೇಕು ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ಮಾತನಾಡಿ, ದೇಶಕ್ಕಾಗಿ ಹೋರಾಡಿ ಮಡಿದ ಹುತಾತ್ಮರ ಜೀವನ ಆದರ್ಶವಾಗಬೇಕು. ನಾವೆಲ್ಲರೂ ದೇಶಪ್ರೇಮ ಬೆಳೆಸಿಕೊಳ್ಳಬೇಕು ಎಂದು ಹೇಳಿ ಎಲ್ಲರಿಗೂ ಶುಭಾಶಯ ತಿಳಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ದೇಶಭಕ್ತಿಯನ್ನು ಸಾರುವ ದೇಶಭಕ್ತಿ ಗೀತೆ ಹಾಗೂ ನೃತ್ಯ ಪ್ರದರ್ಶನ ನಡೆಯಿತು.2ನೇ ತರಗತಿಯ ಅದ್ವಿನ್, ಶ್ರೀಕೃಷ್ಣ ವೇಷಧಾರಿಯಾಗಿ ಶ್ರೀಕೃಷ್ಣ ಜನ್ಮಾಷ್ಠಮಿ ನೃತ್ಯ ಪ್ರದರ್ಶನ ನೀಡಿದರು.ಬಳಿಕ ಯುವ ಜಾದೂಗಾರ ಪುಷ್ಪರಾಜ್ ನೆಲ್ಯಾಡಿ ಇವರಿಂದ ಜಾದೂ ಪ್ರದರ್ಶನ ನಡೆಯಿತು.
ಡೀಕನ್ ಜಾರ್ಜ್ ,ಕಡಬ ತಾಲೂಕು ಅಕ್ರಮ ಸಕ್ರಮ ಸಮಿತಿಯ ಪದಾಧಿಕಾರಿ ಆದಂ,ಶಿರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಕಾರ್ತಿಕೇಯನ್, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿಮ್ಸನ್ ಕೆ.ಜೆ,ಶಾಲಾ ಆಡಳಿತ ಅಧಿಕಾರಿ ಜಾನ್ ಕೆ.ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಜಯಪ್ರಕಾಶ್, ಶಿಕ್ಷಕ ವೃಂದ,ಪಾಲಕರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಮಾಧ್ಯಮ ವಿಭಾಗದ ಮುಖ್ಯಗುರು ಶ್ರೀಧರ ಗೌಡ ಎಲ್ಲರನ್ನು ಸ್ವಾಗತಿಸಿದರು. ಆಂಗ್ಲಮಾಧ್ಯಮ ವಿಭಾಗದ ಮುಖ್ಯಗುರು ಸಿಬಿಚ್ಚನ್ ಟಿ.ಸಿ ಎಲ್ಲರನ್ನೂ ವಂದಿಸಿದರು.ಶಿಕ್ಷಕ ಯಶೋಧರ ಕಾರ್ಯಕ್ರಮ ನಿರೂಪಿಸಿದರು.