ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ನೂತನವಾಗಿ ನಿರ್ಮಿಸಿದ ಧ್ವಜಸ್ತಂಭದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ನೆಲ್ಯಾಡಿ ಗ್ರಾ.ಪಂ.ಸದಸ್ಯ ಮಹಮ್ಮದ್ ಇಕ್ಬಾಲ್ ಅವರ ಅನುದಾನದಲ್ಲಿ ನಿರ್ಮಿಸಲಾದ ಧ್ವಜಸ್ತಂಭವನ್ನು ನೆಲ್ಯಾಡಿ ಹೊರಠಾಣೆಯ ಹೆಡ್ಕಾನ್ಸ್ಟೇಬಲ್ ಪ್ರವೀಣ್ ಅವರು ಉದ್ಘಾಟಿಸಿದರು. ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ರಮ್ಲತ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಸದಸ್ಯೆ ಉಷಾ ಜೋಯಿ, ನೆಲ್ಯಾಡಿ ಮಸೀದಿ ಅಧ್ಯಕ್ಷ ಎನ್.ಎಸ್. ಸುಲೈಮಾನ್, ನೋಟರಿ ವಕೀಲ ಇಸ್ಮಾಯಿಲ್ ನೆಲ್ಯಾಡಿ, ವರ್ತಕ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್.ದುರ್ಗಾಶ್ರೀ, ಜೋಸ್ ಮಾತಾ, ನಾಸಿಂ ಸಾಹೇಬ್, ಗ್ರಾ.ಪಂ.ಸಿಬ್ಬಂದಿಗಳು, ಬಾಲ ವಿಕಾಸ ಸಮಿತಿ ಪದಾಧಿಕಾರಿಗಳು, ಅಂಗನವಾಡಿ ಮಕ್ಕಳ ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಗ್ರ.ಪಂ.ಸದಸ್ಯ ಮೊಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಕುಸುಮಾವತಿ ವಂದಿಸಿದರು.