ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಧ್ವಜಾರೋಹಣ ನೆರವೇರಿಸಿದರು.
ಸಂಘದ ಉಪಾಧ್ಯಕ್ಷ ರವಿಚಂದ್ರ ಹೊಸವೊಕ್ಲು, ನಿರ್ದೇಶಕರಾದ ಸರ್ವೋತ್ತಮ ಗೌಡ ಮಾತನಾಡಿದರು. ಕೌಕ್ರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಎಂ.ಕೆ.ಇಬ್ರಾಹಿಂ, ಸಂಘದ ನಿರ್ದೇಶಕರಾದ ಉಷಾ ಅಂಚನ್, ಜಿನ್ನಪ್ಪ ಗೌಡ, ಭಾಸ್ಕರ್ ರೈ, ಬಾಬು ನಾಯ್ಕ್, ಸಂಘದ ಸಿಬ್ಬಂಧಿಗಳು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಕೆ.ಎಂ.ಸ್ವಾಗತಿಸಿದರು. ಗೋಳಿತ್ತೊಟ್ಟು ಶಾಖಾ ವ್ಯವಸ್ಥಾಪಕ ರತ್ನಾಕರ ಬಂಟ್ರಿಯಾಲ್ ವಂದಿಸಿದರು.