ನೆಲ್ಯಾಡಿ: ಇಚ್ಲಂಪಾಡಿ ನೇರ್ಲ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಆ.13ರಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.
ಪೋಷಕರು ಮಧ್ಯಾಹ್ನದವರೆಗೆ ಶ್ರಮದಾನ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪೋಷಕರು ತಾವು ತಯಾರಿಸಿದ ವಿಶೇಷ ಆಹಾರ ತಿನಿಸುಗಳನ್ನು ಮಕ್ಕಳಿಗೆ ಪರಿಚಯಿಸಿ ಬಡಿಸಿದರು. ಎಸ್ಡಿಎಂಸಿ ಉಪಾಧ್ಯಕ್ಷೆ ನಂದಾ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಎಸ್ಡಿಎಂಸಿ ಅಧ್ಯಕ್ಷ ವಸಂತ ಬಿಜೇರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಕಿ ಆಥಿರಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.