ಬರೆಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಬರೆಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರುತಿ ಪ್ರಶಾಂತ್ ಬರೆಪ್ಪಾಡಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯರಾದ ಲೋಹಿತಾಕ್ಷ ಕೆಡೆಂಜಕಟ್ಟ, ಪ್ರವೀಣ್ ಕೆರೆನಾರು, ಗೀತಾ ಕುವೆತ್ತೋಡಿ, ತಾರಾ ಅನ್ಯಾಡಿ, ತಾ. ಪಂ ಮಾಜಿ ಸದಸ್ಯೆ ಲಲಿತಾ ಈಶ್ವರ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಕುದ್ಮಾರು, ಮಹಿಳಾ ಮಂಡಲದ ಅಧ್ಯಕ್ಷೆ ಭಾವನಿ ಉಳವ, ರೋಹಿತ್ ಕೊಡಿಯಾಲುಮೂಲೆ, ಆಶಾಕಾರ್ಯಕರ್ತೆ ಯಮುನಾ, ಭವ್ಯ ಯೋಗೀಶ್ ಬರೆಪ್ಪಾಡಿ, ಸಂಜೀವಿನಿ ಎಂ ಬಿ ಕೆ ಗೌರಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಪಂಚಲಿಂಗೇಶ್ವರ ಮಹಿಳಾ ಮಂಡಲದ ಸದಸ್ಯರು,ಬಾಲವಿಕಾಸ ಸಮಿತಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಕಾರ್ಯಕರ್ತೆ ಸರಸ್ವತಿ ಕೆ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಸೌಮ್ಯ ಸಹಕರಿಸಿದರು.

LEAVE A REPLY

Please enter your comment!
Please enter your name here