ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಕ.ಮಾ.ಪ್ರೌಢಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ಭೂಸೇನೆಯ ನಿವೃತ್ತ ಹವಲ್ದಾರ್ ಗಣೇಶ್ ಕೆ.ಬಿದಿರಾಡಿ ಧ್ವಜಾರೋಹಣ ಮಾಡಿದರು. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್.ವಹಿಸಿದ್ದರು.

ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್ ಸ್ವಾಗತಿಸಿದರು. ಪ.ಪೂ.ಕಾಲೇಜು ಪ್ರಾಂಶುಪಾಲ ಚಂದ್ರಶೇಖರ ವಂದಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯ ಲಕ್ಷ್ಮೀನಾರಾಯಣ ರಾವ್ ಆತೂರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್ ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆದ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಭಾಷಣ ಹಾಗೂ ಅಪರಾಹ್ನ ವಿದ್ಯಾರ್ಥಿಗಳ ಪೋಷಕರಿಗೆ ಖ್ಯಾತ ವಾಗ್ಮಿ, ಶ್ರೀ ನವಾಕ್ಷರೀ ಬಾರ್ಕೂರು ಉಡುಪಿ ಇಲ್ಲಿನ ಎನ್.ಆರ್ .ದಾಮೋದರ ಶರ್ಮರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳ ಪೋಷಕರು, ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
