ವಿವೇಕಾನಂದ ಪಾಲಿಟೆಕ್ನಿಕ್‌ ನಲ್ಲಿ 79ನೇ ಸ್ವಾತಂತ್ರ್ಯೊತ್ಸವದ ಆಚರಣೆ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆ.15ರಂದು 79ನೇ ಸ್ವಾತಂತ್ರ್ಯೊತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಮಹಾದೇವ ಶಾಸ್ತ್ರಿ ಮಣಿಲ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ಹಿರಿಯರು ಗಳಿಸಿ ಕೊಟ್ಟ ಸ್ವಾತಂತ್ರ್ಯವನ್ನು ಕಾಯ್ದುಕೊಂಡು ಬರುವುದು ನಮ್ಮ ಜವಾಬ್ದಾರಿ. ಈ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ದೇಶಸೇವೆ ಮಾಡುವ ಸಂದರ್ಭದಲ್ಲಿ ನಮ್ಮ ಬೆಂಬಲ ಸಹಕಾರ ಸದಾ ಇರುತ್ತದೆ. ಎಂದು ನುಡಿದು ಶುಭಹಾರೈಸಿದರು.


ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿಮನೆ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮುರಳೀಧರ್ ಎಸ್. ಸ್ವಾತಂತ್ರೋತ್ಸವದ ಶುಭಹಾರೈಕೆಗಳನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here