ಉಪ್ಪಿನಂಗಡಿ: ಇಲ್ಲಿನ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಆಚರಿಸಲಾದ 46 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯು ಆ .16ರಂದು ವಿಜೃಂಭಣೆಯಿಂದ ನಡೆಯಿತು.

ವಿವಿಧ ಭಜನಾ ತಂಡಗಳಿಂದ ನೃತ್ಯ ಭಜನೆ , ಚೆಂಡೆ ವಾದ್ಯಗಳು, ಶ್ರೀ ಕೃಷ್ಣ ವೇಷಧಾರಿ ಮಕ್ಕಳ ಉಪಸ್ಥಿತಿಯೊಂದಿಗೆ ಸಾಗಿ ಬಂದ ಶೋಭಾಯಾತ್ರೆಯಲ್ಲಿ ಯುವಕರ ಸಾಹಸಿ ತಂಡಗಳಿಂದ ಪಿರಮಿಡ್ ರಚಿಸಿ ಮಡಿಕೆ ಒಡೆಯುವ ಕಾರ್ಯಕ್ರಮ ಮನಮೋಹಕವಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಸಮಿತಿಯ ಅಧ್ಯಕ್ಷ ಸುರೇಶ್ ಅತ್ರಮಜಲು, ಕಾರ್ಯದರ್ಶಿ ವಿದ್ಯಾಧರ ಜೈನ್, ಗೌರವಾಧ್ಯಕ್ಷರಾದ ಚಂದಪ್ಪ ಮೂಲ್ಯ, ಜಯಂತ ಪೊರೋಳಿ, ಪ್ರಮುಖರಾದ ರಾಮಚಂದ್ರ ಮಣಿಯಾಣಿ, ಸುನೀಲ್ ಕುಮಾರ್ ದಡ್ಡು, ಕಂಗ್ವೆ ವಿಶ್ವನಾಥ ಶೆಟ್ಟಿ, ಹರಿರಾಮಚಂದ್ರ, ಧನಂಜಯ ನಟ್ಟಿಬೈಲ್, ಸುದರ್ಶನ್ , ಯು ಜಿ ರಾಧಾ , ಪ್ರತಾಪ್ ಪೆರಿಯಡ್ಕ, ಕರುಣಾಕರ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.