ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ

0

ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಅತಿಥಿಯಾಗಿ ಆಗಮಿಸಿದ ನಿವೃತ್ತ ಸಹಾಯಕ ಉಪನಿರೀಕ್ಷಕ ಪೂವಣಿ ಗೌಡರವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು.

ಶಾಲೆಯ ಪ್ರಾಂಶುಪಾಲರಾದ ಪ್ರವೀದ್ ಪಿ ಅವರು ಅತಿಥಿಗಳನ್ನು ಹೂ ಕೊಡುವುದರ ಮೂಲಕ ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ನಿವೃತ್ತ ಸಹಾಯಕ ಉಪನಿರೀಕ್ಷಕ ಪೂವಣಿ ಗೌಡ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಗೌರವ ಅತಿಥಿಯಾಗಿ ಹಳೆನೇರೆಂಕಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು ಗುಮ್ಮಣ್ಣ ಗೌಡ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಶ್ರೀ ರಾಮಕುಂಜೇಶ್ವರ ವಿದ್ಯಾಲಯದ ಕಾರ್ಯದರ್ಶಿ ಕೆ. ಸೇಸಪ್ಪ ರೈ ಅವರ ಗೌರವಾನ್ವಿತ ಹಾಜರಾತಿ ಕಾರ್ಯಕ್ರಮಕ್ಕೆ ವಿಶೇಷತೆ ತಂದಿತು. ಶಾಲೆಯ ಸಂಚಾಲಕರಾದ ಶಿವಪ್ರಸಾದ್ ಆಚಾರ್ಯ, ಆಡಳಿತ ಮಂಡಳಿ ಸದಸ್ಯರಾದ ಬಾಲಚಂದ್ರ ಮುಚ್ಚಿಂತ್ತಾಯ ಉಪಸ್ಥಿತರಿದ್ದರು. ಪಿಟಿಎ ಅಧ್ಯಕ್ಷರಾದ ನೀರಾಜ್ ರೈ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಸುಸೂತ್ರವಾಗಿ ನಡೆಯಿತು. ಸರಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ರೇವತಿ ಅವರು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಭಾಷಣಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಎಲ್ಲರೂ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದರು. ಶಿಕ್ಷಕಿ ಕುಮಾರಿ ಹಿತಶ್ರೀ ನಿರೂಪಿಸಿ, ಶಿಕ್ಷಕರಾದ ಶಿವಪ್ರಸಾದ್ ಅವರು ಧನ್ಯವಾದವನ್ನು ಅರ್ಪಿಸಿದರು. ಶಿಕ್ಷಕರು, ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here