ರಮೇಶ್ ಗೌಡ ಪಜಿಮಣ್ಣು ಹಾಗೂ ಸಾಧಕ ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ
ಪುತ್ತೂರು: ಮುಂಡೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಅಂಬಟ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಆಕರ್ಷಕವಾದ ಬ್ಯಾಂಡ್ ಸೆಟ್ ನ ಮೂಲಕ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಮುಂಡೂರು ಗ್ರಾ.ಪಂಗೆ ಹಾಗೂ ಸಿಂಚನ ಗೆಳೆಯರ ಬಳಗ ಬದಿಯಡ್ಕ ಇಲ್ಲಿಗೆ ತೆರಳಿ ಅಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಸಭಾ ಕಾರ್ಯಕ್ರಮದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಅಂಬಟ ವಹಿಸಿದ್ದರು. ಅತಿಥಿಗಳಾಗಿ ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಣ್ಣಾರಾಯ, ಎಸ್‌ಡಿಎಂಸಿಯ ನಿಕಟಪೂರ್ವ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು, ಮಾಜಿ ಅಧ್ಯಕ್ಷ ಇಬ್ರಾಹಿಂ ಮುಲಾರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ರೈ ಪೊಳಲಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.
ಶಾಲೆಯಲ್ಲಿ ಸತತ ನಾಲ್ಕು ಬಾರಿ ಎಸ್‌ಡಿಎಂಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಿಕಟ ಪೂರ್ವ ಅಧ್ಯಕ್ಷ ರಮೇಶ ಗೌಡ ಪಜಿಮಣ್ಣು ಅವರನ್ನು ಹಾಗೂ ಶಾಲೆಯ ಸಾಧಕ ಹಿರಿಯ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಸ್ವಾತಂತ್ರೋತ್ಸವದ ಪ್ರಯುಕ್ತ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.
ಪ್ರತಿ ವರ್ಷದಂತೆ ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ ಪಟ್ಟೆ ಬಹುಮಾನದ ಪ್ರಾಯೋಜಕರಾಗಿ ಸಹಕರಿಸಿದರು. ಮುಂಡೂರು ಗ್ರಾ.ಪಂ ಸದಸ್ಯ ಉಮೇಶ್ ಗೌಡ ಅಂಬಟ, ಎಸ್‌ಡಿಎಂಸಿಯವರು, ಶಿಕ್ಷಕ ವೃಂದದವರು, ಹಿರಿಯ ವಿದ್ಯಾರ್ಥಿಗಳು, ಪೋಷಕರು ಮತ್ತು ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯಗುರು ವಿಜಯ ಪಿ ಸ್ವಾಗತಿಸಿದರು. ಶಿಕ್ಷಕ ರವೀಂದ್ರ ಶಾಸ್ತ್ರಿ ವಂದಿಸಿದರು. ದೈ.ಶಿ.ಶಿಕ್ಷಕಿ ವನಿತಾ ಬಿ ಸನ್ಮಾನ ಪತ್ರ ವಾಚಿಸಿದರು. ಸಾಧಕ ಹಿರಿಯ ವಿದ್ಯಾರ್ಥಿಗಳ ಪಟ್ಟಿಯನ್ನು ಶಿಕ್ಷಕ ಅಬ್ದುಲ್ ಬಶೀರ್.ಕೆ ವಾಚಿಸಿದರು. ಶಿಕ್ಷಕರಾದ ಮೂಕಾಂಬಿಕಾ ಹಾಗೂ ಅನ್ನಪೂರ್ಣ ವಿಜೇತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಸಹ ಶಿಕ್ಷಕ ರಾಮಚಂದ್ರ ಬಿ ಕಾರ್ಯಕ್ರಮ ನಿರೂಪಿಸಿದರು.