ಪುತ್ತೂರು: ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬಲ್ನಾಡು ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಆ.11ರಂದು ಬಲ್ನಾಡು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬಲ್ನಾಡು ಗ್ರಾ.ಪಂ ಅಧ್ಯಕ್ಷೆ ಪರಮೇಶ್ವರಿ ಬಿ.ಆರ್. ದೀಪ ಬೆಳಗಿಸಿ ಚಾಲನೆ ನೀಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್ .ಕೆ. ಮಾತನಾಡಿ, ಸಂಘದ ಉದ್ದೇಶಗಳು,ಅಗತ್ಯತೆಗಳ ಬಗ್ಗೆ ಸಂಘದ ಸದಸ್ಯರಿಗೆ ಮನವರಿಕೆ ಮಾಡಿದರು. ವಲಯ ಮೇಲ್ವಿಚಾರಕಿ ನಮಿತಾ. ಕೆ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಅಮೂಲ್ಯ ಸಾಕ್ಷರತಾ ಕೇಂದ್ರ ಗೀತಾ ಜೀವಸುರಕ್ಷಾ ವಿಮೆಗಳ ಬಗ್ಗೆ ಮಾಹಿತಿ ನೀಡಿದರು.
ಒಕ್ಕೂಟದ ಅಧ್ಯಕ್ಷೆ ಮಮತಾರ ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ಆರೋಗ್ಯ ಅಧಿಕಾರಿ ಯಶೋಧರ, ಅಭಿವೃದ್ಧಿ ಅಧಿಕಾರಿ ದೇವಪ್ಪ ಪಿ.ಆರ್., ಕಾರ್ಯದರ್ಶಿ ಲಕ್ಷ್ಮೀ., ಒಕ್ಕೂಟದ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಇಬ್ಬರು ಸಾಧಕರನ್ನು ಗೌರವಿಸಲಾಯಿತು. ಅತ್ಯುತ್ತಮ ಸ್ವಸಹಾಯ ಸಂಘಗಳನ್ನು ಗುರುತಿಸಲಾಯಿತು. ಸಂಪೂರ್ಣ ಕಾರ್ಯಕ್ರಮ ಪ್ಲಾಸ್ಟಿಕ್ ಬಳಕೆ ಮುಕ್ತವಾಗಿ ಆಯೋಜಿಸಲಾಗಿತ್ತು. ಸಭಿಕರಿಗೆ ಸ್ವಂತ ನಿಧಿಯಲ್ಲಿ ವಿಶೇಷ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ಸದಸ್ಯರಿಗೆ ಆಟೋಟ ಸ್ಪರ್ಧೆ, ಆರೋಗ್ಯ ತಪಾಸಣಾ ಶಿಬಿರ ಹಾಗೂ ಸಂಜೀವಿನಿ ಉತ್ಪನ್ನಗಳ ಸಂತೆ ಏರ್ಪಡಿಸಲಾಯಿತು.
ಒಕ್ಕೂಟದ ಅಧ್ಯಕ್ಷೆ ಮಮತ ಸ್ವಾಗತಿಸಿ, ಸದಸ್ಯೆ ಸುಂದರಿ ವಂದಿಸಿದರು. ಅಕ್ಷತ ವಾರ್ಷಿಕ ವರದಿ ಮಂಡಿಸಿದರು. ಯಮುನಾ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಉಮಾವತಿ ಹಾಗೂ ಅಕ್ಷತಾ ಸಂಘಟನಾ ಗೀತೆ ಹಾಡಿದರು. ಎಂಬಿಕೆ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು. ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ. ಸದಸ್ಯರು, ಸಿಬ್ಬಂದಿಗಳು, ಒಕ್ಕೂಟ ಸಿಬ್ಬಂದಿಗಳು ಉಪಸ್ಥಿತರಿದ್ದರು.