ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ ವತಿಯಿಂದ ಜನ ಸುರಕ್ಷಾ ವಿಮಾ ಯೋಜನೆ ಹಾಗೂ ಅಟಲ್ ಪೆನ್ಷನ್ ವಿಮೆಯ ಬಗ್ಗೆ ಕರ್ನಾಟಕ ಬ್ಯಾಂಕ್ ಸಹಭಾಗಿತ್ವದಲ್ಲಿ ಮಾಹಿತಿ ಗ್ರಾಮ ಸಭೆಯು ಗ್ರಾಪಂ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಶಿಬಿರದಲ್ಲಿ ಕೆನರಾ ಬ್ಯಾಂಕ್ ಆಪ್ತ ಸಮಾಲೋಚಕಿ ಗೀತಾರವರು ಕೆನರಾ ಬ್ಯಾಂಕ್ ವಿಮೆಯ ಬಗ್ಗೆ ಮಾಹಿತಿ ನೀಡಿದರು.
ಕರ್ನಾಟಕ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಆದ ಶ್ರೀಹರಿ ವಿಮೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತ್ರ ಪಲ್ಲತ್ತಡ್ಕ ಸೇರಿದಂತೆ ಎಲ್ಲಾ ಸದಸ್ಯರು,ಪಂಚಾಯತ್ ಅಭಿವೃದ್ಧಿ ನಮಿತಾ ಎ.ಕೆ, ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಸಿಬ್ಬಂದಿಗಳು, ಗ್ರಂಥಪಾಲಕಿ, ಸಾರ್ವಜನಿಕರು ಉಪಸ್ಥಿತರಿದ್ದರು.