ವಿದ್ವತ್ ಶಿಕ್ಷಣ ಸಂಸ್ಥೆಯಿಂದ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಕಾರ್ಯಕ್ರಮ

0

ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ : ಸುಭಾಷ್ಚಂದ್ರ ಶೆಟ್ಟಿ

ಪುತ್ತೂರು: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆ, ಇದರ ಇನ್ಸ್ಪೈರ್ ವಿದ್ವತ್ ಸೈನ್ಸ್ ಫೋರಂ ಇದರ ಆಶ್ರಯದಲ್ಲಿ ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಎನ್ ಸಿ ಇ ಆರ್ ಟಿ ಮಾರ್ಗಸೂಚಿಯ ಪ್ರಕಾರ ನೀಡಿದ ” ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ” ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ನಿವೃತ್ತ ಪ್ರಾಂಶುಪಾಲ ಹಾಗೂ ಶಿಕ್ಷಣ ತಜ್ಞ ಪಾರ್ಥಸಾರಥಿ ಭಾಗವಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದಲ್ಲಿ ನೀಡಿರುವ ಪ್ರತಿಯೊಂದು ವಿಷಯಗಳ ಪರಿಕಲ್ಪನೆಯ ತಿಳುವಳಿಕೆ ಬಹಳ ಮುಖ್ಯವಾಗಿದೆ. ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆಯು, ವಿದ್ಯಾರ್ಥಿಗಳು ವಿಷಯವನ್ನು ಆಳವಾಗಿ ಅರ್ಥೈಸಿಕೊಳ್ಳಲು ಅನುಕೂಲವಾಗುತ್ತದೆ. ಪ್ರಾಥಮಿಕ ಮತ್ತು ಪ್ರೌಢ ಹಂತದಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನವನ್ನು ಪ್ರಯೋಗಗಳ ಮೂಲಕ ಕಲಿಸಿದಲ್ಲಿ, ಅವರಲ್ಲಿ ಕ್ರಿಯಾಶೀಲತೆ ಮತ್ತು ಸೃಜನಶೀಲತೆ ಬೆಳೆಯುತ್ತದೆ.
ವಿದ್ವತ್ ಎಜುಕೇಶನ್ ಫೌಂಡೇಶನ್, ಮಕ್ಕಳ ಹಿತದೃಷ್ಟಿಯಿಂದ ಇಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ವಿದ್ವತ್ ಎಜುಕೇಶನ್ ಫೌಂಡೇಶನ್ ಇದರ ಆಶ್ರಯದಲ್ಲಿ “ಇನ್ಸ್ಪೈರ್ ವಿದ್ವತ್ ಸೈನ್ಸ್ ಫೋರಂ” ಮೂಲಕ ಗ್ರಾಮೀಣ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅನುಕೂಲವಾಗುವ ಇಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಗುರಿಯನ್ನು ಹೊಂದಿದೆ. ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದರು.

ಸಂಸ್ಥೆಯ ಕಾರ್ಯದರ್ಶಿಯ ಪ್ರಜ್ವಲ್ ರೈ, ಶ್ಶೈಕ್ಷಣಿಕ ನಿರ್ದೇಶಕ ಗಂಗಾಧರ ಇ.ಮಂಡಗಳಲೆ, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ , ಪ್ರಾಂಶುಪಾಲ ಹರೀಶ್ ಕೆ.ಆರ್ ,ವಿದ್ವತ್ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರತಾಪ್ ದೊಡ್ಡಮನಿ ಉಪಸ್ಥಿತರಿದ್ದರು. ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥ ರಂಗನಾಥ್ ಆರ್ ವಿದ್ವತ್ ಫಾರ್ಮುಲಾ ಕಿರು ಹೊತ್ತಿಗೆ ಯನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಶಾಲೆಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
ಕನ್ನಡ ಉಪನ್ಯಾಸಕ ನೀಲಕಂಠ ಕೆ ಎನ್ ಕಾರ್ಯಕ್ರಮ ನಿರೂಪಿಸಿದರು. ಹಾಗೂ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕ ಬಸವ ಕಿರಣ್ ಜೆ.ಹೆಚ್ ವಂದಿಸಿದರು.

LEAVE A REPLY

Please enter your comment!
Please enter your name here