ಪುತ್ತೂರು: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆ.18ರಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.ಆದೇಶಿಸಿದ್ದಾರೆ.
ಬಂಗಳಾಕೊಲ್ಲಿಯಲ್ಲಿ ವಾಯಭಾರ ಕುಸಿತವಾಗಿದ್ದು ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾರ್ಧಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.