





ಕಾಣಿಯೂರು: ದೋಳ್ಪಾಡಿ- ಕಟ್ಟ ಸಂಪರ್ಕ ರಸ್ತೆಗೆ ಶಾಸಕರ ವಿಶೇಷ ಅನುದಾನದಲ್ಲಿ ಕಾಂಕ್ರಿಟ್ ಕಾಮಗಾರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿ ಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಇಡ್ಯಡ್ಕ, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಲೋಕಯ್ಯ ಪರವ ದೋಳ್ಪಾಡಿ, ದೇವಿಪ್ರಸಾದ್ ದೋಳ್ಪಾಡಿ, ತಾರಾನಾಥ್ ಇಡ್ಯಡ್ಕ, ಅಂಬಾಕ್ಷಿ ಕೂರೇಲು, ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಶಿವರಾಮ್ ದೋಳ್ಪಾಡಿ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಜನಾರ್ದನ ದೋಳ್ಪಾಡಿ, ಕಾರ್ಯದರ್ಶಿ ಭವಿತ್ ಕೂರೇಲು ಹಾಗೂ ಸಹಕಾರ ಸಂಘದ ನಿರ್ದೇಶಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಶಿವರಾಮ ರೈ ಪಿಜಕಳ ಸ್ವಾಗತಿಸಿ, ಲೋಕಯ್ಯ ವಂದಿಸಿದರು.















