ಪುತ್ತೂರು: ಚೇತನಾ ಆಸ್ಪತ್ರೆಯಲ್ಲಿ ಬ್ರೈಟ್ ಪ್ಯಾರಾ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ೭೯ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಚೇತನಾ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಜೆ.ಸಿ ಅಡಿಗ ಅವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಪುತ್ತೂರು ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್ಸೈ ಚಿದಾನಂದ ರೈ, ಕ್ಯೂರ್ ಆಂಡ್ ಕೇರ್ ಕ್ಲಿನಿಕ್ನ ಡಾ.ಪ್ರಭು, ಚೇತನಾ ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗಿದ್ದು ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಯಿತು. ಪತ್ರಾವೋ ಆಸ್ಪತ್ರೆಯ ಸಹಯೋಗದೊಂದಿಗೆ ಮಾದಕ ವ್ಯಸನದ ವಿರುದ್ಧ ಪ್ರತಿಜ್ಞಾ ವಿಧಿ ಸ್ವೀಕಾರ ನಡೆಯಿತು.
ಪ್ಯಾರಾಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಮಹಮ್ಮದ್ ಸಲೀಂ ಸ್ವಾಗತಿಸಿದರು. ಬ್ರೈಟ್ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ನಂದಿತಾ ಕಾರ್ಯಕ್ರಮ ನಿರೂಪಿಸಿದರು.