ಉಪ್ಪಿನಂಗಡಿ: ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇಯ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಕೆಮ್ಮಾರ ಶಾಲೆಯ ಶಾಲಾಭಿವೃಧ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಅಝೀಝ್ ಬಿ.ಕೆ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಸ್ವಾಗತಿಸಿ ಮಾತನಾಡಿದ ಶಾಲಾ ಮುಖ್ಯಗರುಗಳಾದ ಶ್ರೀಮತಿ ಜಯಶ್ರೀ ಎಂ. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಮತ್ತು ಸಂಗ್ರಾಮದಲ್ಲಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು. ಕೆಮ್ಮಾರ ಸರಕಾರಿ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಮತ್ತು ನಿವೃತ್ತ ಯೋಧರಾದ ಶ್ರೀಯುತ ಚಿತ್ತರಂಜನ್ ಹಾಗೂ ಶ್ರೀಯುತ ಗುಣಾಕರ ಇವರಿಗೆ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಶಾಲಾ ಮಕ್ಕಳಿಂದ ಸ್ವಾತಂತ್ರ್ಯ ದಿನದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಹಿರೆಬಂಡಾಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಾರಿಜಾಕ್ಷಿ, ಮೊಹಿಯುದ್ದೀನ್ ಜುಮಾ ಮಸೀದಿ ಇದರ ಮಾಜಿ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ ಕೆಮ್ಮಾರ, ನಿವೃತ್ತ ಮುಖ್ಯ ಗುರುಗಳಾದ ಶ್ರೀಯುತ ಕುಶಾಲಪ್ಪ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಮೋಹನದಾಸ್ ಶೆಟ್ಟಿ ಬಡಿಲ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಅಸ್ಮಾ ಮತ್ತು ಸಮಿತಿ ಸದಸ್ಯರುಗಳು, ಮಾಜಿ ಅಧ್ಯಕ್ಷರುಗಳು, ಹಿರಿಯ ವಿದ್ಯಾರ್ಥಿಗಳು, ಪೋಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಶಾಲಾ ಶಿಕ್ಷಕಿ ಸುಮನ ಕಾರ್ಯಕ್ರಮ ನಿರೂಪಿಸಿದರೆ, ಶಿಕ್ಷಕಿ ಲೀನಾ ಲಸ್ರಾದೊ ಧನ್ಯವಾದಗೈದರು.