ಕಡಬ: ಕುಟ್ರುಪಾಡಿ ಗ್ರಾಮದ ವಾಳ್ಯ ಸ.ಕಿ.ಪ್ರಾ. ಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವರಾಮಗೌಡ ಉಳಿಪು ಇವರು ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಸೇವಿಯರ್ ಬೇಬಿ ಉಳಿಪು, ಪಂಚಾಯತ್ ಸದಸ್ಯ ಕಿರಣ್ ಗೋಗಟೆ, ಮಾಧವಿ ಹಾಗೂ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ರೇವತಿ ಹಾಗೂ ಎಲ್ಲಾ ಸದಸ್ಯರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಶಿನಾಥ ಗೋಗಟೆ, ಅಂಗನವಾಡಿಯ ಶಿಕ್ಷಕಿಯರು ಬಾಲ ವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಲಾ ದಾನಿಗಳಾದ ದಿವಾಕರ್ ಹೆಬ್ಬಾರ್ ಹಾಗೂ ರೂಪೇಶ್ ಶೆಟ್ಟಿ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲೆಗೆ ಹದಿನಾರು ಸಾವಿರದ ಐನೂರು ಮೌಲ್ಯದ ಗ್ರಂಥಾಲಯದ ಕವಾಟನ್ನು ಕೊಡುಗೆಯಾಗಿ ನೀಡಿದರು. ಈ ಕೊಡುಗೆ ನೀಡಿದ ರೂಪೇಶ್ ಶೆಟ್ಟಿ ಅಭಿಮಾನಿ ಬಳಗದವರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಹಾಗೂ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ರಕ್ಷಾ ಗೌರವ ಶಿಕ್ಷಕಿ ಇವರು ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕಿ ಮಂಜುಳಾ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಶೋಭಾವತಿ ಇವರು ವಂದನಾರ್ಪಣೆ ಸಲ್ಲಿಸಿದರು.