ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಆ.19 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಬಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು.
ಪುತ್ತೂರು ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಿಡಿಒ ಸಂಧ್ಯಾಲಕ್ಷ್ಮೀ ತಿಳಿಸಿದ್ದಾರೆ.