ಪುತ್ತೂರು: ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ನಡೆಯಲಿರುವ 40ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಆ.17ರಂದು ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಗಣೇಶೋತ್ಸವ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಉಮೇಶ್ ಮಿತ್ತಡ್ಕ ದೀಪ ಬೆಳಗಿಸಿ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶುಭಹಾರೈಸಿದರು. ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಮನಮೋಹನ್ ರೈ ಚೆಲ್ಯಡ್ಕ, ಅಧ್ಯಕ್ಷ ಶರತ್ ಕುಮಾರ್ ಪಾರ, ಪ್ರಧಾನ ಕಾರ್ಯದರ್ಶಿ ಗಣೇಶ್ ಹೊಳ್ಳ ತೋಟದಮೂಲೆ, ಕೋಶಾಧಿಕಾರಿ ಉಚಿತ್ ಕುಮಾರ್ ಬದಿನಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಮರಣ್ದೀಪ್ ಪಾರ ಪ್ರಾರ್ಥಿಸಿದರು. ಅಂಗನವಾಡಿ, ಕಿರಿಯ, ಹಿರಿಯ, ಪ್ರೌಢಶಾಲೆ ಹಾಗೂ ಯುವಕ ಯುವತಿಯರಿಗೆ, ಸಾರ್ವಜನಿಕರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ಶಾಟ್ಪುಟ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ವಾಣಿ ಬೈಂಕ್ರೋಡು, ಗೌತಮಿ ಅನುದೀಪ್, ಗೋಪಾಲಕೃಷ್ಣ ಮಿತ್ತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ದಾಮೋದರ್ ಕಜೆ ಸಹಕರಿಸಿದರು.

ಸಮಾರೋಪ ಸಮಾರಂಭ:
ಸಂಜೆ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ರೈ ಕೆಲ್ಲಾಡಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ದಾಮೋದರ್ ಕಜೆ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಮನಮೋಹನ್ ರೈ ಚೆಲ್ಯಡ್ಕ, ಪ್ರಧಾನ ಕಾರ್ಯದರ್ಶಿ ಗಣೇಶ್ ಹೊಳ್ಳ ತೋಟದಮೂಲೆ, ಕೋಶಾಧಿಕಾರಿ ಉಚಿತ್ ಕುಮಾರ್ ಬದಿನಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಪಾರ ವಂದಿಸಿದರು. ಶಿವಪ್ರಸಾದ್ ತಲೆಪ್ಪಾಡಿ ಹಾಗೂ ಕೃಷ್ಣಪ್ರಸಾದ್ ಬೆಟ್ಟಂಪಾಡಿ ವಿವಿಧ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.