ರಾಮಕುಂಜ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಸ/ತ್ಯಾಜ್ಯ ಎಸೆಯುವವರಿಗೆ 10 ಸಾವಿರ ರೂ.ದಂಡ ವಿಧಿಸಲು ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಪಿಡಿಒ ಮೋಹನ್ಕುಮಾರ್ ತಿಳಿಸಿದ್ದಾರೆ.
ಕಸ ಎಸೆಯುವವರ ಬಗ್ಗೆ ಮಾಹಿತಿ ನೀಡುವವರಿಗೆ ಸೂಕ್ತ ಬಹುಮಾನ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆ.15ರಿಂದ ಈ ನಿರ್ಣಯ ಜಾರಿಗೆ ಬಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.