ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆದ್ರಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮವು ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ವೈದಿಕತ್ವದಲ್ಲಿ ಆ.19ರಂದು ನಡೆಯಿತು.

ಬೆಳಗ್ಗೆ ಸಂಕಲ್ಪ ಕಾರ್ಯ ನೆರವೇರಿಸಿದ ಬಳಿಕ ಮೃತ್ಯುಂಜಯ ಹೋಮ ಆರಂಭಂಗೊಂಡು ಪೂರ್ಣಾಹುತಿಯ ಬಳಿಕ ಭಕ್ತರಿಗೆ ಪ್ರಸಾದ ನೀಡಲಾಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ಈಶ್ವರ ಬೆಡೇಕರ್, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ ಉಪಸ್ಥಿತರಿದ್ದರು.