ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ : ಡಿ.ಎನ್.ಎ ಪರೀಕ್ಷೆಗೆ ಆರೋಪಿ, ಸಂತ್ರಸ್ತೆ,ಮಗುವಿನ ರಕ್ತ ಸಂಗ್ರಹ

0

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.19ರಂದು ನ್ಯಾಯಾಲಯದ ಆದೇಶದಂತೆ ಡಿಎನ್‌ಎ ಪರೀಕ್ಷೆಗಾಗಿ ಆರೋಪಿ, ಸಂತ್ರಸ್ತೆ ಹಾಗೂ ಆಕೆಯ ಮಗುವಿನ ರಕ್ತ ಸಂಗ್ರಹಿಸಲಾಗಿದೆ.


ಪ್ರಕರಣದ ವಿಚಾರಣೆಯು ಆ.19ರಂದು ಪುತ್ತೂರು ನ್ಯಾಯಾಲಯದಲ್ಲಿ ನಡೆದಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಧೀಶರ ಸಮ್ಮುಖದಲ್ಲಿ ಸರಕಾರಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ಆರೋಪಿ ಶ್ರೀಕೃಷ್ಣ ಜೆ.ರಾವ್, ಸಂತ್ರಸ್ತ ಯುವತಿ ಹಾಗೂ ಆಕೆಯ ಮಗುವಿನ ರಕ್ತ ಸಂಗ್ರಹಿಸಲಾಗಿದೆ.

ಪ್ರಕರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಶ್ರೀಕೃಷ್ಣ ಜೆ.ರಾವ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂವರ ರಕ್ತವನ್ನು ಸಂಗ್ರಹಿಸಿ ಬೆಂಗಳೂರು ಎಫ್‌ಎಸ್‌ಎಸ್‌ಎಲ್‌ಗೆ ತನಿಖೆಗಾಗಿ ಕಳುಹಿಸಿಕೊಡಲಾಗಿದೆ.

LEAVE A REPLY

Please enter your comment!
Please enter your name here