ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಆರೋಪ ಕುರಿತು ಡಾ.ಡಿ.ವೀರೇಂದ್ರ ಹೆಗ್ಡೆ ಮೊದಲ ಮಾತು

0

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಮಾಡಲಾಗಿದೆ ಎಂಬ ಆರೋಪ ಆಧಾರ ರಹಿತವಾಗಿದ್ದು, ಸುಳ್ಳು ಮತ್ತು ನೈತಿಕವಾಗಿ ತಪ್ಪು ಎಂದು ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಡೆ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಎಸ್‌ ಐ ಟಿ ಯನ್ನು ಸ್ವಾಗತಿಸಿರುವ ಅವರು, ತನಿಖೆಗೆ ನಮ್ಮ ಸಂಪೂರ್ಣ ಸಹಕಾರವಿದ್ದು, ಸತ್ಯಾಂಶ ಬೇಗನೆ ಹೊರಬರಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವ ಸುಳ್ಳು ವರದಿಗಳಿಂದ ನಮಗೆ ನೋವಾಗಿದೆ. ಭಕ್ತರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಅಪಪ್ರಚಾರ ಮಾಡಲಾಗುತ್ತಿದೆ. ನಮ್ಮ ದಾಖಲೆಗಳನ್ನು ಮುಕ್ತವಾಗಿಟ್ಟಿದ್ದೇವೆ. ತನಿಖೆ ನಡೆದು ಸತ್ಯ ಎಲ್ಲರಿಗೂ ತಿಳಿಯಬೇಕು ಎಂದು ಹೇಳಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ
https://x.com/i/status/1957750961692139638

https://x.com/pti_news/status/1957750924681835008?s=48

LEAVE A REPLY

Please enter your comment!
Please enter your name here