ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಸಾಮೆತ್ತಡ್ಕದ ರಸ್ತೆಯ ಇಕ್ಕೆಲಗಳಲ್ಲೂ ಎತ್ತರಕ್ಕೆ ಬೆಳೆದ ಗಿಡಗಂಟಿಗಳಿಂದ ಕೂಡಿದ ಪೊದೆಗಳ ರಾಶಿಯಿಂದಾಗಿ ವಾಹನ ಸವಾರರು ಜೊತೆಗೆ ಪಾದಚಾರಿಗಳು ಕೂಡ ಪರದಾಡುವಂತಾಗಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬ ಬಗ್ಗೆ ಸಚಿತ್ರ ವರದಿಯನ್ನು “ಸುದ್ದಿ”ಯಲ್ಲಿ ಪ್ರಕಟಿಸಲಾಗಿತ್ತು.
ಸುದ್ದಿ ಪತ್ರಿಕೆಯಲ್ಲಿ ಬಂದ ವರದಿಯನ್ನು ಗಮನಿಸಿದ ನಗರಸಭೆಯು ರಸ್ತೆ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.