ಆಲಂಕಾರು: ದುರ್ಗಾಂಬಾ ವಿದ್ಯಾವರ್ಧಕ ಸಂಘ ಆಲಂಕಾರು ಇದರ ವತಿಯಿಂದ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಡಳಿತ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ ಭಟ್ ಉಪ್ಪಂಗಳ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ದುರ್ಗಾಂಬಾ ವಿದ್ಯಾವರ್ಧಕ ಸಂಘ ರಿ. ಆಲಂಕಾರು ಇದರ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು, ಕಾರ್ಯದರ್ಶಿ ಈಶ್ವರ ಗೌಡ ಪಜ್ಜಡ್ಕ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಪದ್ಮಪ್ಪ ಗೌಡ .ಕೆ ಮತ್ತು ಅಶೋಕ ಕೊಯಿಲ, ಆಡಳಿತ ಮಂಡಳಿಯ ನಿರ್ದೇಶಕರಾದ ಮುತ್ತಪ್ಪ ಪೂಜಾರಿ ನೆಯ್ಯಲ್ಗ, ವಿಜಯಕುಮಾರ್ ರೈ ಮನವಳಿಕೆ, ಇಂದುಶೇಖರ ಶೆಟ್ಟಿ, ದಯಾನಂದ ಗೌಡ ಆಲಡ್ಕ, ಸರೋಜಾ ಉಮೇಶ್ ರೈ ಮನವಳಿಕೆ, ನಿವೃತ್ತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಜಗನ್ನಾಥ ಶೆಟ್ಟಿ ಮನವಳಿಕೆ, ಆಡಳಿತ ಅಧಿಕಾರಿ ಶ್ರೀಪತಿ ರಾವ್ ಎಚ್, ಆಲಂಕಾರು ಗ್ರಾಮ ಪಂಚಾಯತಿ ಸದಸ್ಯರಾದ ಶಾರದಾ ಸೇರಿದಂತೆ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ಮುಖ್ಯ ಗುರುಗಳಾದ ನವೀನ್ ರೈ ಸ್ವಾಗತಿಸಿ, ಪ್ರಾಂಶುಪಾಲರಾದ ರೂಪ ಎಂ ಟಿ ಅವರು ಧನ್ಯವಾದ ಸಮರ್ಪಿಸಿದರು. ಆಂಗ್ಲಭಾಷಾ ಶಿಕ್ಷಕರಾದ ಜನಾರ್ದನ ಅವರು ಕಾರ್ಯಕ್ರಮ ನಿರೂಪಿಸಿದರು.